ಇಸ್ಲಾಮಾಬಾದ್ (ಪಿಟಿಐ): ಭಾರತಕ್ಕೆ `ಅತ್ಯಂತ ಸ್ನೇಹಮಯಿ ರಾಷ್ಟ್ರ~ ಸ್ಥಾನಮಾನ ನೀಡಲು ನಿರ್ಧರಿಸಲಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವೆ ಹೀನಾ ರಬ್ಬಾನಿ ಖರ್ ಸಂಸತ್ ಅಧಿವೇಶನದಲ್ಲಿ ಹೇಳಿದ್ದಾರೆ.
ರಾಷ್ಟ್ರೀಯ ಸಭೆಯ (ಪಾಕ್ ಸಂಸತ್‌ನ ಕೆಳಮನೆ) ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಪಾಕ್- ಭಾರತ ದ್ವಿಪಕ್ಷೀಯ ಒಪ್ಪಂದದ ಅನೇಕ ವಿಷಯಗಳಲ್ಲಿ ಯಶ ಸಾಧಿಸಲಾಗಿದೆ. ಎರಡು ವರ್ಷಗಳ ಬಳಿಕ ಉಭಯ ದೇಶಗಳ ನಡುವೆ ಮಾತುಕತೆ ಆರಂಭವಾಗಿದೆ ಎಂದಿದ್ದಾರೆ. ಆದರೆ, ಭಾರತಕ್ಕೆ ಈ ಸ್ಥಾನಮಾನ ನೀಡುವ ನಿರ್ಧಾರ ಕಾರ್ಯರೂಪಕ್ಕೆ ಬರುವ ಕುರಿತು ಅವರು ಯಾವುದೇ ವಿವರಣೆ ನೀಡಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.