ADVERTISEMENT

ಭಾರತ-ಜಪಾನ್ ಕರೆನ್ಸಿ ವಿನಿಮಯ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2013, 19:59 IST
Last Updated 6 ಸೆಪ್ಟೆಂಬರ್ 2013, 19:59 IST

ಸೇಂಟ್ ಪೀಟರ್ಸ್‌ಬರ್ಗ್ (ಪಿಟಿಐ): ಭಾರತ ಮತ್ತು ಜಪಾನ್ ರಾಷ್ಟ್ರಗಳು ತಮ್ಮ ಕರೆನ್ಸಿ ವಿನಿಮಯ ಒಪ್ಪಂದವನ್ನು ವಿಸ್ತರಿಸಲು ನಿರ್ಧರಿಸಿವೆ.

ವಿನಿಮಯ ಪ್ರಮಾಣವನ್ನು ಪ್ರಸ್ತುತ 1,500 ಕೋಟಿ ಡಾಲರ್‌ನಿಂದ 5,000 ಕೋಟಿ ಡಾಲರ್‌ಗೆ ರೂ.99,000 ಕೋಟಿಯಿಂದರೂ.3.3 ಲಕ್ಷ ಕೋಟಿಗೆ) ಹೆಚ್ಚಿಸಲು ಉಭಯ ರಾಷ್ಟ್ರಗಳು ಶುಕ್ರವಾರ ಸಮ್ಮತಿಸಿವೆ. ರೂಪಾಯಿ ಅಪಮೌಲ್ಯವನ್ನು ತಡೆಯುವ ನಿಟ್ಟಿನಲ್ಲಿ ಇದು ಮಹತ್ವದ ಬೆಳವಣಿಗೆ ಎಂದು ಹೇಳಲಾಗಿದೆ.

`ಜಿ20' ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಜಪಾನ್ ಉಪ ಪ್ರಧಾನಿ ಹಾಗೂ ಹಣಕಾಸು ಸಚಿವರಾದ ಟಾರೊ ಅಸೊ ಅವರ ನಡುವೆ ನಡೆದ ಮಾತುಕತೆಯ ವೇಳೆ ಈ ನಿರ್ಧಾರಕ್ಕೆ ಬರಲಾಗಿದೆ.

ಸಾಕಷ್ಟು ವಿದೇಶಿ ವಿನಿಮಯ ಮೀಸಲು-ಮೊಂಟೆಕ್: ರೂಪಾಯಿ ಅಪಮೌಲ್ಯವನ್ನು ತಡೆಯಲು ಭಾರತದ ಬಳಿ ಸಾಕಷ್ಟು ವಿದೇಶಿ ವಿನಿಮಯ ಮೀಸಲು ಸಂಗ್ರಹ ಇದೆ ಎಂದು ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಹೇಳಿದ್ದಾರೆ.

ಪ್ರಸ್ತುತ ಭಾರತದ ಬಳಿ 28,000 ಕೋಟಿ ಡಾಲರ್ (ಅಂದಾಜುರೂ.18.48 ಲಕ್ಷ ಕೋಟಿ) ವಿದೇಶಿ ವಿನಿಮಯ ಮೀಸಲು ಮೊತ್ತ ಇದ್ದು, ದೇಶದ ಆರ್ಥಿಕ ಬಿಕ್ಕಟ್ಟು ಸುಧಾರಿಸಲು ಯಾವುದೇ ಬಾಹ್ಯ ನೆರವನ್ನು ಪಡೆಯುವ ಸಾಧ್ಯತೆಯನ್ನು ಅವರು ತಳ್ಳಿಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.