ADVERTISEMENT

ಭಾರತ ಮೂಲದ ಮಹಿಳೆ ಅನುಮಾನಾಸ್ಪದ ಸಾವು

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2013, 19:30 IST
Last Updated 5 ಡಿಸೆಂಬರ್ 2013, 19:30 IST

ಮೆಲ್ಬರ್ನ್‌ (ಪಿಟಿಐ): ಭಾರತ ಮೂಲದ ಮಹಿಳೆಯೊಬ್ಬರು ತೀವ್ರ ಸುಟ್ಟ ಗಾಯಗಳಿಂದ ಮೃತಪಟ್ಟಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪರ್ವಿಂದರ್‌ ಕೌರ್‌ (೩೧) ಮೃತಪಟ್ಟಿದ್ದು, ಸೋಮವಾರ ನಡೆದ ಈ ಘಟನೆಯಲ್ಲಿ ಅವರು ಶೇ ೮೫ರಷ್ಟು ಸುಟ್ಟ ಗಾಯಗಳಿಂದ ನರಳಿದ್ದು, ಆಸ್ಪತ್ರೆಗೆ ದಾಖಲಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ.

ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ, ಕಳೆದ ವರ್ಷ ಪತಿ ಕುಲ್ವಿಂದರ್‌ ಸಿಂಗ್‌ ಜತೆ ಕೌರ್‌ ಜಗಳ­ವಾಡಿದ್ದರು. ನಂತರ ಶಾಂತಿಯುತವಾಗಿ ಸಮಸ್ಯೆಯನ್ನು ಬಗೆಹರಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.