ಪೋರ್ಟ್-ಅ-ಪ್ರಿನ್ಸ್/ ಹೈಟಿ(ಎಪಿ): ಇಲ್ಲಿನ ಹಿಸ್ಪಾನಿಯೋಲದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂ ಕುಸಿತದಿಂದ ಸುಮಾರು 9ಮಂದಿ ಸತ್ತಿದ್ದು, ಹನ್ನೊಂದು ಸಾವಿರಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರದ ದಕ್ಷಿಣ ಮತ್ತು ಪಶ್ಚಿಮ ಭಾಗಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ ಎಂದು ಹೈಟಿ ನಾಗರಿಕ ಸಂರಕ್ಷಣಾ ಕಚೇರಿಯ ಅಧಿಕಾರಿಗಳು ಹೇಳಿದ್ದಾರೆ. ಹೈಟಿಯಲ್ಲಿ 2010ರಲ್ಲಿ ಸಂಭವಿಸಿದ ಭೂಕಂಪದಲ್ಲಿ ಐದು ಲಕ್ಷಕ್ಕೂ ಅಧಿಕ ಮಂದಿ ನಿರ್ವಸಿತರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.