ADVERTISEMENT

ಭೂ ಕಂಪನ: ಸಾವಿನ ಸಂಖ್ಯೆ 40ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2013, 19:59 IST
Last Updated 17 ಏಪ್ರಿಲ್ 2013, 19:59 IST

ಇಸ್ಲಾಮಾಬಾದ್ (ಐಎಎನ್‌ಎಸ್): ಪಾಕಿಸ್ತಾನದಲ್ಲಿ ಮಂಗಳವಾರ ಸಂಭವಿಸಿದ ಪ್ರಬಲ ಭೂ ಕಂಪನದಲ್ಲಿ ಸತ್ತವರ ಸಂಖ್ಯೆ 40ಕ್ಕೆ ಏರಿಕೆಯಾಗಿದ್ದು, ಸುಮಾರು 300 ಮಂದಿ ಗಾಯಗೊಂಡಿದ್ದಾರೆ ಎಂದು ಪಾಕ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಸಂಭವಿಸಿದ ನೈರುತ್ಯ ಬಲೂಚಿಸ್ತಾನ ಪ್ರಾಂತ್ಯದ ಮಶ್ಕೆಲ್ ಪ್ರದೇಶದ ವಾಷ್ಕೆಲ್ ಜಿಲ್ಲೆಯಲ್ಲಿ ಕಂಪನದ ತೀವ್ರತೆ 7.9 ದಾಖಲಾಗಿದ್ದು, ಒಂದು ಸಾವಿರಕ್ಕೂ ಅಧಿಕ ಮನೆಗಳು ನೆಲಸಮವಾಗಿವೆ ಎಂದು ಕ್ಸಿನ್‌ಹುವಾ ವರದಿ ಮಾಡಿದೆ.

`ಕಂಪನ ಸಂಭವಿಸಿದ ಪ್ರದೇಶದಲ್ಲಿ ಸೇನಾಪಡೆಗಳು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಅನೇಕ ಮಂದಿ ಕಟ್ಟಡಗಳ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ' ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಎನ್‌ಡಿಎಂಎ) ವಕ್ತಾರ ಇರ್ಷಾದ್ ಭಟ್ಟಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಆಗ್ನೇಯ ಇರಾನ್, ದುಬೈ, ಬಹರಿನ್ ಹಾಗೂ ದಕ್ಷಿಣ ಏಷ್ಯಾದ ಹಲವೆಡೆ ಮಂಗಳವಾರ ಸಂಭವಿಸಿದ ಪ್ರಬಲ ಭೂ ಕಂಪನದಲ್ಲಿ ನೂರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.