ADVERTISEMENT

ಮದುವೆ ಊಟ ಸೇವಿಸಿ 24 ಮಂದಿ ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2014, 19:30 IST
Last Updated 10 ಮಾರ್ಚ್ 2014, 19:30 IST

ಬೀಜಿಂಗ್ ( ಪಿಟಿಐ): ಮದುವೆ ಸಮಾರಂಭದಲ್ಲಿ ವಿಷಾಹಾರಯುಕ್ತ ಊಟ  ಸೇವಿಸಿ 24 ಜನ ಅಸ್ವಸ್ಥರಾದ ಘಟನೆ ಚೀನಾದ ವಾಯವ್ಯ ಪ್ರಾಂತ್ಯದಲ್ಲಿ ನಡೆದಿದೆ ಎಂದು ಇಲ್ಲಿನ ಮಾಧ್ಯಮಗಳು ವರದಿ ಮಾಡಿದೆ.

ಊಟದ ನಂತರ  ಹೊಟ್ಟೆ ನೋವು ಮತ್ತು ವಾಂತಿ ಕಾಣಿಸಿಕೊಂಡು ಅಸ್ವಸ್ಥರಾದ ಪರಿಣಾಮ ಅಸ್ವಸ್ಥರನ್ನು    ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ತೀವ್ರ ನಿಗಾ ಘಟಕದ ನಿರ್ದೇಶಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.