ADVERTISEMENT

ಮಲಾಲಾ ಚೇತರಿಕೆ; ಬೆಂಬಲಕ್ಕೆ ಕೃತಜ್ಞತೆ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2012, 19:30 IST
Last Updated 9 ನವೆಂಬರ್ 2012, 19:30 IST

ಲಂಡನ್ (ಪಿಟಿಐ): ತಾಲಿಬಾನ್ ಉಗ್ರರ ದಾಳಿಗೆ ತುತ್ತಾಗಿ ಇಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಾಕಿಸ್ತಾನದ ಹೆಣ್ಣುಮಕ್ಕಳ ಶಿಕ್ಷಣ ಹಕ್ಕು ಹೋರಾಟಗಾರ್ತಿ ಮಲಾಲಾ ಯೂಸುಫ್‌ಝಾಯಿ ಆರೋಗ್ಯ ಸ್ಥಿತಿ ತೃಪ್ತಿದಾಯಕವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ವೈದ್ಯರ ತಂಡವು ಮಲಾಲಾ ಆರೋಗ್ಯದ ಮೇಲೆ ನಿಗಾ ಇಟ್ಟಿದೆ. ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ಮಲಾಲಾ ಚಿಕಿತ್ಸೆ ಪಡೆಯುತ್ತಿರುವ ಬರ್ಮಿಂಗ್‌ಹ್ಯಾಂನ ಕ್ವೀನ್ ಎಲಿಜಬೆತ್ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.

ಕೃತಜ್ಞತೆ: ವಿಶ್ವದಾದ್ಯಂತ ತಮ್ಮನ್ನು ಬೆಂಬಲಿಸಿದ ಜನರಿಗೆ ಮಲಾಲಾ ಕೃತಜ್ಞತೆ ಸಲ್ಲಿಸಿದ್ದಾರೆ.
`ತನ್ನ ಆರೋಗ್ಯದ ಬಗ್ಗೆ ಕಾಳಜಿ ತೋರಿಸುತ್ತಿರುವ ಎಲ್ಲರಿಗೂ ಆಕೆ ಆಭಾರಿಯಾಗಿದ್ದಾಳೆ~ ಎಂದು ಮಲಾಲಾ ತಂದೆ ಜಿಯಾವುದ್ದೀನ್ ಯೂಸುಫ್‌ಝಾಯಿ ಅವರು ಹೇಳಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.