ADVERTISEMENT

ಮಲಾಲಾ ಭೇಟಿ ಮಾಡಿದ ಜರ್ದಾರಿ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2012, 22:00 IST
Last Updated 9 ಡಿಸೆಂಬರ್ 2012, 22:00 IST
ಮಲಾಲಾ
ಮಲಾಲಾ   

ಲಂಡನ್ (ಪಿಟಿಐ): ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರು ಚಿಕಿತ್ಸೆ ಪಡೆಯುತ್ತಿರುವ ಬಾಲಕಿ ಮಲಾಲಾ ಯೂಸುಫ್‌ಝಾಯಿಯನ್ನು ಶನಿವಾರ ಭೇಟಿ ಮಾಡಿದ್ದಾರೆ ಎಂದು ಬರ್ಮಿಂಗ್ ಹ್ಯಾಂ ವಿಶ್ವವಿದ್ಯಾಲಯ ಆಸ್ಪತ್ರೆಯ `ಎನ್‌ಎಚ್‌ಎಸ್' ಪ್ರತಿಷ್ಠಾನ ಟ್ರಸ್ಟ್ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಶಸ್ತಿ ಪ್ರದಾನ: ಮುಂಬೈ (ಐಎಎನ್‌ಎಸ್): ಮುಂಬೈನ `ಸೌಹಾರ್ದ ಪ್ರತಿಷ್ಠಾನ'ವು ಸಾಮಾಜಿಕ ನ್ಯಾಯಕ್ಕಾಗಿ ನೀಡುವ `ಮದರ್ ತೆರೇಸಾ ಸ್ಮಾರಕ' ಪ್ರಶಸ್ತಿಗೆ ಆಯ್ಕೆಯಾಗಿದ್ದ ಪಾಕಿಸ್ತಾನದ ಬಾಲಕಿ ಮಲಾಲಾ ಯೂಸುಫ್‌ಝಾಯಿಗೆ ಈ ಪ್ರಶಸ್ತಿಯನ್ನು ತಲುಪಿಸಲಾಗಿದೆ ಎಂದು ಪ್ರತಿಷ್ಠಾನ ಹೇಳಿದೆ.

ಪಾಕಿಸ್ತಾನದಲ್ಲಿ ಮಹಿಳೆಯರ ಶಿಕ್ಷಣಕ್ಕಾಗಿ ಧ್ವನಿ ಎತ್ತಿ, ಉಗ್ರರ ದಾಳಿಯಿಂದ ತೀವ್ರ ಗಾಯಗೊಂಡ ಮಲಾಲಾ, ಸದ್ಯ ಲಂಡನ್ನಿನ ಬರ್ಮಿಂಗ್‌ಹ್ಯಾಂನಲ್ಲಿರುವ ಕ್ವೀನ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಆದರೂ ಅವರ ಕುಟುಂಬದವರಿಗೆ ಪ್ರಶಸ್ತಿಯನ್ನು ತಲುಪಿಸಲಾಗಿದೆ ಎಂದು ಪ್ರತಿಷ್ಠಾನ  ತಿಳಿಸಿದೆ. `ಸೌಹಾರ್ದ ಪ್ರತಿಷ್ಠಾನ'ವು ನ.28ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.