ಕರಾಚಿ (ಪಿಟಿಐ): ಪಾಕಿಸ್ತಾನ ಸಮುದ್ರ ಗಡಿಯೊಳಗೆ ಪ್ರವೇಶಿಸಿ ಮೀನುಗಾರಿಕೆಯಲ್ಲಿ ತೊಡಗಿದ್ದ 23 ಮಂದಿ ಭಾರತೀಯ ಮೀನುಗಾರರನ್ನು ಬಂಧಿಸಿ, ಮೂರು ದೋಣಿಗಳನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಪಾಕಿಸ್ತಾನ ಅಧಿಕಾರಿಗಳು ತಿಳಿಸಿದ್ದಾರೆ.
ಎಚ್ಚರಿಕೆಯನ್ನು ನೀಡಿದ್ದರೂ, ಪಾಕಿಸ್ತಾನದ ಸಮುದ್ರದ ಗಡಿ ಪ್ರವೇಶಿಸಿ ಮೀನುಗಾರಿಕೆಯಲ್ಲಿ ತೊಡಗಿದ್ದ ಪರಿಣಾಮ ಅವರನ್ನು ಬಂಧಿಸಲಾಗಿದೆ ಎಂದು ಪಾಕಿಸ್ತಾನದ ಕಡಲ್ಗಾವಲು ಪಡೆಯ ವಕ್ತಾರರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.