ADVERTISEMENT

ಮುಂಬೈ ದಾಳಿ ಅಧಿಕಾರಿಗೆ ಸಮನ್ಸ್

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2013, 19:59 IST
Last Updated 6 ಏಪ್ರಿಲ್ 2013, 19:59 IST

ಇಸ್ಲಾಮಾಬಾದ್ (ಪಿಟಿಐ): ಮುಂಬೈ ದಾಳಿ ಸಂಚಿನಲ್ಲಿ ಶಾಮಿಲಾಗಿರುವ ಏಳು ಆರೋಪಿಗಳ ವಿಚಾರಣೆ ನಡೆಸುತ್ತಿರುವ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ಶನಿವಾರ ಹಿರಿಯ ತನಿಖಾಧಿಕಾರಿಗೆ ಸಮನ್ಸ್ ಜಾರಿ ಮಾಡಿದೆ.

ಭದ್ರತೆಯ ಕಾರಣಕ್ಕಾಗಿ ರಾವಲ್ಪಿಂಡಿಯ ಅಡಿಯಾಲ ಕಾರಾಗೃಹದಲ್ಲಿ ರಹಸ್ಯವಾಗಿ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಚೌಧರಿ ಹಬೀಬ್-ಉರ್-ರೆಹಮಾನ್, ತನಿಖಾ ಸಂಸ್ಥೆಯ ಹೆಚ್ಚುವರಿ ನಿರ್ದೇಶಕ ಅಲ್ತಾಫ್ ಹುಸೇನ್‌ಗೆ ಸಮನ್ಸ್ ಜಾರಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.