ADVERTISEMENT

ಮುಂಬೈ ದಾಳಿ: 24ರಂದು ವಿಚಾರಣೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2011, 17:25 IST
Last Updated 19 ಫೆಬ್ರುವರಿ 2011, 17:25 IST

ಲಾಹೋರ್ (ಪಿಟಿಐ): ಮುಂಬೈ ದಾಳಿಗೆ ಸಂಬಂಧಿಸಿದಂತೆ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ (ಎಫ್‌ಐಎ) ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಪಾಕಿಸ್ತಾನದ ನ್ಯಾಯಾಲಯ ಇದೇ 24ರಂದು ಕೈಗೆತ್ತಿಕೊಳ್ಳಲಿದೆ.

ದಾಳಿಯಲ್ಲಿ ಬದುಕುಳಿದಿರುವ ಏಕೈಕ ಭಯೋತ್ಪಾದಕ ಅಜ್ಮಲ್ ಕಸಾಬ್, ಮತ್ತೊಬ್ಬ ಶಂಕಿತ ಫಾಹಿಮ್ ಅನ್ಸಾರಿ ಅವರನ್ನು ‘ಘೋಷಿತ ಅಪರಾಧಿಗಳು’ ಎಂದು ಗುರುತಿಸಿ ದಾಳಿಯ ಇತರ ಶಂಕಿತ ಆರೋಪಿಗಳಿಂದ ಪ್ರತ್ಯೇಕವಾಗಿ ಅವರ ವಿಚಾರಣೆ ನಡೆಸಲು ಅನುವು ಮಾಡಿಕೊಡಬೇಕು ಎಂದು ಎಫ್‌ಐಎ ಕೋರಿದೆ.

ಈ ಸಂಬಂಧ ಹೈಕೋರ್ಟ್ ಆದೇಶ ಹೊರಬೀಳುವವರೆಗೂ ಭಯೋತ್ಪಾದನೆ ನಿಗ್ರಹ ನ್ಯಾಯಾಲಯದಲ್ಲಿ ನಡೆಯಬೇಕಿದ್ದ ಲಷ್ಕರ್-ಎ-ತೊಯ್ಬಾ ಕಮಾಂಡರ್ ಜಕೀಉರ್ ರೆಹಮಾನ್ ಹಾಗೂ ಇತರ ಏಳು ಶಂಕಿತರ ವಿಚಾರಣೆಯನ್ನು ತಡೆಹಿಡಿಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.