ಕೈರೊ, (ಪಿಟಿಐ): ಪ್ರಜಾಪ್ರಭುತ್ವ ಪರ ಹೋರಾಟಗಾರರ ಮೇಲೆ ನಡೆಸಿದ ಹಿಂಸಾಚಾರಕ್ಕೆ ಸಂಬಂಧಿಸಿ ಈಜಿಪ್ಟ್‌ನ ಪದಚ್ಯುತ ಅಧ್ಯಕ್ಷ ಹೋಸ್ನಿ ಮುಬಾರಕ್ ಮತ್ತು ಇಬ್ಬರು ಪುತ್ರರನ್ನು ವಿಚಾರಣೆಗೆ ಗುರಿಪಡಿಸಲು ಈಜಿಪ್ಟ್‌ನ ನ್ಯಾಯಾಧೀಶರು ಆದೇಶ ನೀಡಿದ್ದಾರೆ.
ಪ್ರತಿಭಟನಾಕಾರರ ಒತ್ತಾಯಕ್ಕೆ ಮಣಿದು ಈ ಆದೇಶವನ್ನು ನೀಡಲಾಗಿದೆ. ವಿಚಾರಣೆಯ ವೇಳೆ ಮುಬಾರಕ್ ಮತ್ತು ಅವರ ಪುತ್ರರ ಸುರಕ್ಷತೆಯನ್ನು ಕಾಪಾಡುವಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಆಂತರಿಕ ಸಚಿವ ಮನ್ಸೂರ್ ಎಸ್ಸಾವಿ ಇದೇ ವೇಳೆ ತಿಳಿಸಿದರು.ಆದರೆ ವಿಚಾರಣೆಯ ದಿನಾಂಕವನ್ನು ಇದುವರೆಗೆ ನಿಗಧಿ ಪಡಿಸಲಾಗಿಲ್ಲ ಎಂದು ಅಲ್ ಜಝೀರಾ ವರದಿ ಮಾಡಿದೆ. ಒಂದು ವೇಳೆ ಮುಬಾರಕ್ ಅವರು ವಿಚಾರಣೆಗೆ ಹಾಜರಾಗದಿದ್ದಲ್ಲಿ ಅವರನ್ನು ಬಂಧಿಸಲಾಗುವುದು ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.