ADVERTISEMENT

ಮುಸ್ಲಿಂ ಮಾಲೀಕರ ಹೋಟೆಲ್‌ಗಳ ಮೇಲೆ ದಾಳಿ

ಪಿಟಿಐ
Published 11 ಮಾರ್ಚ್ 2018, 19:30 IST
Last Updated 11 ಮಾರ್ಚ್ 2018, 19:30 IST

ಕೊಲಂಬೊ: ಶ್ರೀಲಂಕಾದಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, ವಾಯವ್ಯ ಪ್ರಾಂತ್ಯದಲ್ಲಿ ಮುಸ್ಲಿಂ ಮಾಲೀಕರಿಗೆ ಸೇರಿದ ಹೋಟೆಲ್‌ಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

‘ಕೊಲಂಬೊದಿಂದ 130 ಕಿ.ಮೀ. ದೂರದಲ್ಲಿರುವ ಪುಟ್ಟಲಂ ಜಿಲ್ಲೆಯ ಜಿಲ್ಲೆಯ ಅನಾಮದುವಾ ಗ್ರಾಮದಲ್ಲಿ ಬೆಳಿಗ್ಗೆ 4.30ರ ಸುಮಾರಿಗೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ’ ಎಂದು ಕೊಲಂಬೊ ಟೆಲಿಗ್ರಾಫ್‌ ಪತ್ರಿಕೆ ವರದಿ ಮಾಡಿದೆ.

ಶ್ರೀಲಂಕಾದಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿದ್ದು, ಕರ್ಫ್ಯೂ ಮುಂದುವರಿಸಲಾಗಿದೆ.

ADVERTISEMENT

ಪ್ರಮುಖ ನಗರಗಳಲ್ಲಿ ಸೇನೆಯನ್ನು ನಿಯೋಜಿಸಲಾಗಿದೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ 135 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಮಿತಿ ರಚನೆ: ಕ್ಯಾಂಡಿಯಲ್ಲಿ ಸಂಭವಿಸಿದ ಕೋಮು ಗಲಭೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲು ಅಧ್ಯಕ್ಷ ಸಿರಿಸೇನಾ ಅವರು ಮೂವರು ಸದಸ್ಯರ ಸಮಿತಿಯನ್ನು ಶನಿವಾರ ರಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.