ADVERTISEMENT

ಮೊರಾಕ್ಕೊ, ಕುವೈತ್‌ನಲ್ಲೂ ಪ್ರತಿಭಟನೆ ತೀವ್ರ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2011, 17:15 IST
Last Updated 7 ಮಾರ್ಚ್ 2011, 17:15 IST

ರಬತ್/ ಕುವೈತ್(ಎಎಫ್‌ಪಿ): ಪ್ರಜಾಪ್ರಭುತ್ವ ಸ್ಥಾಪನೆಗಾಗಿ ತೈಲ ರಾಷ್ಟ್ರಗಳಲ್ಲಿ ಪ್ರತಿಭಟನೆ ಮುಂದುವರೆದಿದ್ದು, ಕುವೈತ್ ಮತ್ತು ಮೊರಾಕ್ಕೊದಲ್ಲೂ ಸರ್ಕಾರದ ವಿರುದ್ಧದ ಪ್ರತಿಭಟನೆ ತೀವ್ರಗೊಂಡಿದೆ.

ರಾಜಕೀಯ ಕ್ಷೇತ್ರದಲ್ಲಿ ತುರ್ತಾಗಿ ಸುಧಾರಣೆ ತರುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರಜಾಪ್ರಭುತ್ವ ಪರವಿರುವ ನೂರಾರು ಜನರು ಭಾನುವಾರ ಮೊರಾಕ್ಕೊ ಸಂಸತ್ತಿನ ಎದುರು  ಪ್ರತಿಭಟನೆ ನಡೆಸಿದರು.

ಈ ಮಧ್ಯೆ, ಪ್ರಧಾನಿ ಪದತ್ಯಾಗಕ್ಕೆ ಆಗ್ರಹಿಸಿ ಮಂಗಳವಾರ ಕುವೈತ್‌ನಲ್ಲಿ ಯುವಕರ ಗುಂಪು ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದೆ.  ಸರ್ಕಾರದ ವಿರುದ್ಧ ಜನರನ್ನು ಸಂಘಟಿಸಲು ಯುವಕರ ಗುಂಪು ಟ್ವಿಟ್ಟರ್ ಮತ್ತು ಫೇಸ್ ಬುಕ್ ಮೊರೆ ಹೋಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.