ಸನಾ (ಐಎಎನ್‌ಎಸ್): ಯೆಮನ್ ಅಧ್ಯಕ್ಷ ಅಲಿ ಅಬ್ದುಲ್ ಸಲೇಹ ಪರ ಹಾಗೂ ವಿರೋಧಿ ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ದಕ್ಷಿಣ ತಾಜಿ ನಗರದಿಂದ 20 ಕಿ.ಮೀ ದೂರದಲ್ಲಿರುವ ಅಲಿ ಮಾಫಿರ್ ನಗರದ ಬಳಿ ಬುಧವಾರ ರಾತ್ರಿ ಸುಮಾರು 200ಕ್ಕೂ ಅಧಿಕ ಮಂದಿ ಸರ್ಕಾರಿ ವಿರೋಧಿ ಗುಂಪು ಹಾಗೂ ಪರ ಗುಂಪುಗಳ ನಡುವೆ ಘರ್ಷಣೆ ನಡೆಯಿತು ಎಂದು ಪ್ರತ್ಯೇಕದರ್ಶಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.