ADVERTISEMENT

ಯೋಗಕ್ಕೆ ಕ್ರೀಡಾ ಮಾನ್ಯತೆ ನೀಡಿದ ಸೌದಿ ಅರೇಬಿಯಾ

ಏಜೆನ್ಸೀಸ್
Published 14 ನವೆಂಬರ್ 2017, 11:39 IST
Last Updated 14 ನವೆಂಬರ್ 2017, 11:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಿಯಾದ್: ಭಾರತದ ಪುರಾತನ ಯೋಗಾಭ್ಯಾಸಕ್ಕೆ ಸೌದಿ ಅರೇಬಿಯಾ ಸರ್ಕಾರ ಕ್ರೀಡಾ ಮಾನ್ಯತೆ ನೀಡಿದೆ.

ಸೌದಿ ಅರೇಬಿಯಾದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಮಂಗಳವಾರ ಯೋಗವನ್ನು ಕ್ರೀಡಾ ಚಟುವಟಿಕೆಗಳ ಪಟ್ಟಿಯಲ್ಲಿ ಉಲ್ಲೇಖಿಸಿದೆ. ಮುಸ್ಲಿಂ ರಾಷ್ಟ್ರವಾದ ಸೌದಿ ಅರೇಬಿಯಾದಲ್ಲಿ ಇನ್ನು ಮುಂದೆ ಸರ್ಕಾರದಿಂದ ಪರವಾನಗಿ ಪಡೆದುಕೊಂಡು ಯೋಗಾಭ್ಯಾಸ ಮಾಡಬಹುದಾಗಿದೆ. ಯೋಗದ ಬಗ್ಗೆ ಪ್ರಚಾರವನ್ನೂ ಮಾಡಬಹುದಾಗಿದೆ.

2015ರಲ್ಲಿ ವಿಶ್ವಸಂಸ್ಥೆಯು ಜೂನ್ 21 ಅನ್ನು ಅಂತರರಾಷ್ಟ್ರೀಯ ಯೋಗ ದಿನವನ್ನಾಗಿ ಘೋಷಿಸಿತ್ತು. ಸೌದಿ ಅರೇಬಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಅಲ್ಲಿರುವ ಭಾರತೀಯರ ಶಾಲೆಗಳಲ್ಲಿ ಯೋಗ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ನೌಫಲ್ ಮರ್‌ವಾಯಿ ಅವರು ಯೋಗ ಪಾಠ ಮಾಡಿದ ಮೊದಲ ಸೌದಿ ಮಹಿಳೆಯಾಗಿ ಗುರುತಿಸಿಕೊಂಡಿದ್ದಾರೆ. ಇವರು, ಸೌದಿಯಲ್ಲಿ ಯೋಗವನ್ನು ಪ್ರಚುರಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.