ಮೆಲ್ಬರ್ನ್ (ಪಿಟಿಐ): ರಕ್ಷಣಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರ ನೀಡಲು ಭಾರತ ಮತ್ತು ಆಸ್ಟ್ರೇಲಿಯಾ ನಿರ್ಧರಿಸಿವೆ.
ಕ್ಯಾನ್‌ಬೆರಾದಲ್ಲಿ ಬುಧವಾರ ನಡೆದ ಸಭೆಯಲ್ಲಿ ರಕ್ಷಣಾ ಸಚಿವ ಎ.ಕೆ.ಆಂಟನಿ ಮತ್ತು ಆಸ್ಟ್ರೇಲಿಯಾ ರಕ್ಷಣಾ ಸಚಿವ ಸ್ಟೀಫನ್ ಸ್ಮಿತ್ ಈ ನಿರ್ಧಾರ ಕೈಗೊಂಡಿದ್ದಾರೆ.
`ಸಮುದ್ರದಲ್ಲಿನ ಸುರಕ್ಷತೆ, ರಕ್ಷಣಾ ಕ್ಷೇತ್ರದಲ್ಲಿ ಬಾಂಧವ್ಯ ವೃದ್ಧಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದಿದೆ. ಅಂತರರಾಷ್ಟ್ರೀಯ ಮತ್ತು ಪ್ರಾಂತೀಯ ಸುರಕ್ಷತೆ ಕುರಿತು ಸಭೆಯಲ್ಲಿ ಉಭಯ ಮುಖಂಡರು ತೀವ್ರ ಕಳವಳ ವ್ಯಕ್ತಪಡಿಸಿದರು' ಎಂದು ಆಸ್ಟ್ರೇಲಿಯಾ ರಕ್ಷಣಾ ಸಚಿವಾಲಯ ಹೊರಡಿಸಿರುವ ಅಧಿಕೃತ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.