ಕ್ರಿಮ್‌ಸ್ಕ್, ರಷ್ಯಾ (ಎಎಫ್‌ಪಿ): ಇಲ್ಲಿನ ಕ್ರಾಸ್‌ನೊಡಾರ್ ಪ್ರಾಂತ್ಯದ ದಕ್ಷಿಣ ಭಾಗದಲ್ಲಿ ಶನಿವಾರ ಕಂಡುಬಂದ ಭೀಕರ ಪ್ರವಾಹ ಪರಿಸ್ಥಿತಿಯಲ್ಲಿ ಕನಿಷ್ಠ 150 ಮಂದಿ ಸಾವನ್ನಪ್ಪಿದ್ದಾರೆ.
ಈ ಪ್ರದೇಶದಲ್ಲಿ ಇದುವರೆಗೆ ಕಂಡುಬಂದ ಅತ್ಯಂತ ದೊಡ್ಡ ನೈಸರ್ಗಿಕ ವಿಕೋಪ ಇದಾಗಿದ್ದು ಪ್ರವಾಹದಿಂದಾಗಿ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡ ಪರಿಣಾಮವಾಗಿ 29,000ದಷ್ಟು ಜನರು ಕತ್ತಲೆಯಲ್ಲಿ ಕಾಲ ಕಳೆಯುವಂತಾಯಿತು.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಸ್ವತಃ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಭಾರೀ ರಭಸದಿಂದ ರಾತ್ರಿ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸಾಧ್ಯವಾಗದೆ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಸಮೀಪದ ಜಲಾಶಯದ ಕ್ರಸ್ಟ್ ಗೇಟ್‌ಗಳನ್ನು ತೆರೆದದ್ದೇ ಪ್ರವಾಹಕ್ಕೆ ಕಾರಣವಾಗಿರಬಹುದು ಎಂದೂ ಅವರು ಶಂಕಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.