ADVERTISEMENT

ಲಂಡನ್‌ ಪೊಲೀಸರಿಂದ ಉದ್ಯಮಿ ವಿಜಯ್ ಮಲ್ಯ ಬಂಧನ

ಏಜೆನ್ಸೀಸ್
Published 3 ಅಕ್ಟೋಬರ್ 2017, 12:05 IST
Last Updated 3 ಅಕ್ಟೋಬರ್ 2017, 12:05 IST
ವಿಜಯ್ ಮಲ್ಯ (ಸಂಗ್ರಹ ಚಿತ್ರ)
ವಿಜಯ್ ಮಲ್ಯ (ಸಂಗ್ರಹ ಚಿತ್ರ)   

ಲಂಡನ್: ಸಾವಿರಾರು ಕೋಟಿ ರೂಪಾಯಿ ಸಾಲ ಮರುಪಾವತಿ ಮಾಡದೆ ಬ್ರಿಟನ್‌ಗೆ ತೆರಳಿದ್ದ ಉದ್ಯಮಿ ವಿಜಯ್ ಮಲ್ಯ ಅವರನ್ನು ಲಂಡನ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅವರನ್ನು ವೆಸ್ಟ್‌ಮಿನಿಸ್ಟರ್‌ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆ ಇದೆ.

ಅಕ್ರಮ ಹಣಕಾಸು ಚಟುವಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಮಲ್ಯ ಅವರನ್ನು ಬಂಧಿಸಲಾಗಿದೆ ಎಂದು ದೂರದರ್ಶನ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT