ADVERTISEMENT

ಲಾಡೆನ್ ಹತ್ಯೆ:ಸಮಿತಿ ರಚನೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2011, 18:40 IST
Last Updated 1 ಜೂನ್ 2011, 18:40 IST

ಇಸ್ಲಾಮಾಬಾದ್ (ಐಎಎನ್‌ಎ): ಭಯೋತ್ಪಾದಕ ಒಸಾಮ ಬಿನ್ ಲಾಡೆನ್ ಹತ್ಯೆಯ ತನಿಖೆಯನ್ನು ಪಾಕಿಸ್ತಾನದ ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದ ಐವರು ಸದಸ್ಯರ ಸಮಿತಿ ನಡೆಸಲಿದೆ.

ಪ್ರಧಾನಿ ಯೂಸುಫ್ ರಜಾ ಗಿಲಾನಿ ಅವರು ರಚಿಸಿರುವ ಈ ಸಮಿತಿಯ ನೇತೃತ್ವವನ್ನು ಹಿರಿಯ ನ್ಯಾಯಮೂರ್ತಿ ಜಾವೆದ್ ಇಕ್ಬಾಲ್ ವಹಿಸಿಕೊಳ್ಳಲಿದ್ದಾರೆ. ಹಿಂದೆ ದೆಹಲಿಯಲ್ಲಿ ಹೈ ಕಮಿಷನರ್ ಆಗಿ ಕಾರ್ಯ ನಿರ್ವಹಿಸಿದ್ದ ಮಾಜಿ ರಾಜತಾಂತ್ರಿಕ ಅಶ್ರಫ್ ಜಹಾಂಗೀರ್ ಖಾಜಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಇತರ ಸದಸ್ಯರಾಗಿದ್ದಾರೆ. ಪಾಕಿಸ್ತಾನದಲ್ಲಿ ಒಸಾಮ ಅಸ್ತಿತ್ವ, ಅಮೆರಿಕದ ಕಾರ್ಯಾಚರಣೆ, ಘಟನೆಯಲ್ಲಿ ದೇಶದ ಅಧಿಕಾರಿಗಳ ವೈಫಲ್ಯ ಇತ್ಯಾದಿಗಳ ಬಗ್ಗೆ ತನಿಖೆ ನಡೆಯಲಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.