ADVERTISEMENT

ಲಾಲ್ ಬಹಾದ್ದೂರ್ ಶಾಸ್ತ್ರಿ ಪುಣ್ಯಸ್ಮರಣೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2013, 19:59 IST
Last Updated 11 ಜನವರಿ 2013, 19:59 IST

ತಾಷ್ಕೆಂಟ್ (ಪಿಟಿಐ): ಭಾರತದ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಮೃತಪಟ್ಟ ಸ್ಥಳವಾದ ತಾಷ್ಕೆಂಟ್‌ನಲ್ಲಿ ಶುಕ್ರವಾರ ಅವರ 42ನೇ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು.

ಶಾಸ್ತ್ರಿ ಪ್ರತಿಮೆ ಇರುವ ಸ್ಥಳದಲ್ಲಿ ಏರ್ಪಡಿಸಿದ್ದ ಸರಳ ಕಾರ್ಯಕ್ರಮದಲ್ಲಿ ಅವರನ್ನು ಉಜ್ಬೇಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಗಿತೇಶ್ ಶರ್ಮಾ ಸ್ಮರಿಸಿದರು. ಶಾಲಾ ಮಕ್ಕಳು, ಸ್ಥಳೀಯ ಪ್ರತಿನಿಧಿಗಳು, ರಾಯಭಾರ ಕಚೇರಿ ಅಧಿಕಾರಿಗಳು ಮತ್ತು ಭಾರತೀಯ ಇತಿಹಾಸ ಅಧ್ಯಯನ ಶಾಸ್ತ್ರಜ್ಞರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.