
ಪ್ರಜಾವಾಣಿ ವಾರ್ತೆ
ನ್ಯೂಯಾರ್ಕ್ (ಪಿಟಿಐ): ಅಮೆರಿಕದ ಲಾಸ್ ಏಂಜಲೀಸ್ ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ವಲಸೆ ವಿಭಾಗದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಅಮೆರಿಕದ ವಿಮಾನ ನಿಲ್ದಾಣಗಳಲ್ಲಿ ಅಧಿಕಾರಿಗಳು ಹೀಗೆ ತಮ್ಮನ್ನು ಪದೇ ಪದೇ ವಶಕ್ಕೆ ಪಡೆಯುವ ಬಗ್ಗೆ ಶಾರುಖ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಭದ್ರತಾ ಕ್ರಮಗಳ ಬಗ್ಗೆ ನನಗೆ ಸಂಪೂರ್ಣ ಅರಿವಿದೆ. ಮತ್ತು ಅದನ್ನು ನಾನು ಗೌರವಿಸುತ್ತೇನೆ. ಆದರೆ, ಅಮೆರಿಕದ ವಲಸೆ ವಿಭಾಗದ ಅಧಿಕಾರಿಗಳು ಪ್ರತಿ ಬಾರಿ ಹೀಗೆ ವಶಕ್ಕೆ ಪಡೆಯುವುದು ಹಿಂಸೆಯಾಗುತ್ತದೆ’ ಎಂದು ಶಾರುಖ್ ಖಾನ್ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.