ಲಾಹೋರ್(ಪಿಟಿಐ): ಪಾಕಿಸ್ತಾನದಲ್ಲಿ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ಸರಬ್ಜಿತ್ ಸಿಂಗ್ಗೆ ಜೈಲಿನಲ್ಲಿ ತಮ್ಮ ವಕೀಲರನ್ನು ಭೇಟಿ ಮಾಡಲು ಪಾಕಿಸ್ತಾನ ನ್ಯಾಯಾಲಯ ಸೋಮವಾರ ಅನುಮತಿ ನೀಡಿದೆ.
ಈ ಕುರಿತು ಸರಬ್ಜಿತ್ ಪರ ವಕೀಲ ಅವಾಯಿಸ್ ಶೇಕ್ ಮತ್ತು ಪಂಜಾಬ್ ಪ್ರಾಂತ್ಯದ ಸಹಾಯಕ ಅಡ್ವೋಕೇಟ್ ಜನರಲ್ ಅವರ ವಾದವನ್ನು ಆಲಿಸಿದ ಲಾಹೋರ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಉಮರ್ ಅತಾ ಬಂದಿಯಾಲ್ ಈ ಆದೇಶ ಹೊರಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.