ADVERTISEMENT

ವಿಶ್ವಸಂಸ್ಥೆ ಕಚೇರಿ ಮೇಲೆ ದಾಳಿ: ನಾಲ್ವರ ವಿರುದ್ಧ ಆರೋಪ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2011, 19:30 IST
Last Updated 18 ಸೆಪ್ಟೆಂಬರ್ 2011, 19:30 IST

ಅಬುಜಾ, (ಪಿಟಿಐ): ನೈಜೀರಿಯಾದಲ್ಲಿನ ವಿಶ್ವಸಂಸ್ಥೆಯ ಕಚೇರಿ ಮೇಲೆ ಬಾಂಬ್ ದಾಳಿ ನಡೆಸಿದ ಆರೋಪಕ್ಕೊಳಗಾದ ನಾಲ್ವರ ಮೇಲೆ ಇಲ್ಲಿನ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದೆ.

ಬೋಕೊ ಹರಾಮ್ ಎಂಬ ಮುಸ್ಲಿಂ ಸಂಘಟನೆಗೆ ಸೇರಿದ್ದ ಈ ನಾಲ್ವರು ಆಗಸ್ಟ್ 26ರಂದು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಒಟ್ಟು 23 ಮಂದಿ ಸತ್ತು, 116 ಮಂದಿ ಗಾಯಗೊಂಡಿದ್ದರು.

ನಾಲ್ವರ ಕುರಿತಾದ ಆರೋಪದ ವಿಚಾರಣೆಯ ಬಳಿಕ ನ್ಯಾಯಾಧೀಶರು ಪ್ರಕರಣವನ್ನು ಹೈಕೋರ್ಟ್‌ಗೆ ವರ್ಗಾಯಿಸಿದರು.

15 ಕೋಟಿ ಜನಸಂಖ್ಯೆಯನ್ನು ಹೊಂದಿರುವ ತೈಲ ಸಂಪತ್ತಿನ ಪಶ್ಚಿಮ ಆಫ್ರಿಕಾದಲ್ಲಿ ಇಸ್ಲಾಮಿಕ್ ಶರಿಯಾ ಪದ್ಧತಿಯನ್ನು ವ್ಯಾಪಕ ಪ್ರಮಾಣದಲ್ಲಿ ಜಾರಿಗೆ ತರಬೇಕೆಂದು ಬೋಕೊ ಹರಾಮ್ ಸಂಘಟನೆ ಬಯಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.