ನ್ಯೂಯಾರ್ಕ್ (ಪಿಟಿಐ): ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು 16ರಿಂದ ಕೈಗೊಳ್ಳಲಿರುವ ಉಪವಾಸ ಸತ್ಯಾಗ್ರಹಕ್ಕೆ ವಿದೇಶಗಳಲ್ಲೂ ಬೆಂಬಲ ವ್ಯಕ್ತವಾಗುತ್ತಿದೆ.
`ಭ್ರಷ್ಟಾಚಾರ ವಿರುದ್ಧ ಭಾರತ~ (ಐಎಸಿ) ಸಂಘಟನೆಯ ಸದಸ್ಯರು ಶನಿವಾರ ನ್ಯೂಯಾರ್ಕ್ನಲ್ಲಿರುವ ವಿಶ್ವಸಂಸ್ಥೆ ಕಚೇರಿ ಮುಂದೆ ಅಣ್ಣಾ ಹಜಾರೆ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಪ್ರದರ್ಶನ ನಡೆಸಿದರು.
ಭ್ರಷ್ಟಾಚಾರದ ವಿರುದ್ಧ ಅಣ್ಣಾ ಹಜಾರೆ ನಡೆಸಲಿರುವ ನಿರಶನದ ಕುರಿತು ಅಂತರರಾಷ್ಟ್ರೀಯ ಸಮುದಾಯ ಗಮನ ಸೆಳೆಯುವುದಕ್ಕಾಗಿ `ಭ್ರಷ್ಟಾಚಾರ ವಿರುದ್ಧ ಭಾರತ~ ಈ ಪ್ರದರ್ಶನವನ್ನು ಹಮ್ಮಿಕೊಂಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.