ADVERTISEMENT

ವೈಮಾನಿಕ ದಾಳಿ: 38 ಉಗ್ರರ ಸಾವು

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2012, 19:30 IST
Last Updated 1 ಫೆಬ್ರುವರಿ 2012, 19:30 IST

ಇಸ್ಲಾಮಾಬಾದ್ (ಪಿಟಿಐ): ಭದ್ರತಾ ಪಡೆಗಳು ನಡೆಸಿದ ವೈಮಾನಿಕ ದಾಳಿಯಲ್ಲಿ ಪಾಕಿಸ್ತಾನ ತಾಲಿಬಾನ್ ಉಗ್ರ ಸಂಘಟನೆಯ ಹಿರಿಯ ಮುಖಂಡ ಸೇರಿದಂತೆ 38 ಉಗ್ರರು ಸಾವನ್ನಪ್ಪಿರುವ ಘಟನೆ ಹಿಂಸಾಪೀಡಿತ ವಾಯವ್ಯ ಪಾಕಿಸ್ತಾನದಲ್ಲಿ ಬುಧವಾರ ನಡೆದಿದೆ.

ಕಳೆದ ಕೆಲವು ತಿಂಗಳಿನಿಂದ ಈ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಿರಂತರ ಸಂಘರ್ಷ ನಡೆಯುತ್ತಿದ್ದು, ಭದ್ರತಾ ಪಡೆಗಳ ಮೇಲೆ ಉಗ್ರರು ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ವೈಮಾನಿಕ ದಾಳಿ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.