ADVERTISEMENT

ಶಾಂತಿ ಮಾತುಕತೆ ಪಾಕ್ ಉತ್ಸುಕ

​ಪ್ರಜಾವಾಣಿ ವಾರ್ತೆ
Published 19 ಜುಲೈ 2013, 19:59 IST
Last Updated 19 ಜುಲೈ 2013, 19:59 IST

ಇಸ್ಲಾಮಾಬಾದ್ (ಪಿಟಿಐ): ಭಾರತದೊಂದಿಗಿನ  ಶಾಂತಿ ಮಾತುಕತೆಗೆ ಮತ್ತೆ ಚಾಲನೆ ನೀಡಲು ಉತ್ಸುಕವಾಗಿರುವುದಾಗಿ ಪಾಕಿಸ್ತಾನ ಹೇಳಿದೆ.

ಈ ಸಂಬಂಧ ನೂತನ ಪ್ರಧಾನಿ ನವಾಜ್ ಷರೀಫ್ ಅವರು ಮಾಜಿ ರಾಜತಾಂತ್ರಿಕ ಶಹ್ರಾರ್ ಖಾನ್ ಅವರನ್ನು ನೇಮಿಸಿದ್ದಾಗಿ ವಿದೇಶಾಂಗ ಕಚೇರಿ ವಕ್ತಾರ ಐಜಾಜ್ ಚೌಧರಿ ಸುದ್ದಿಗಾರರಿಗೆ ತಿಳಿಸಿದರು.

ಮುಂದಿನ ಸುತ್ತಿನ ಮಾತುಕತೆಯ ದಿನಾಂಕ ನಿಗದಿ ಬಗ್ಗೆ ಎರಡೂ ಕಡೆಯ ಅಧಿಕಾರಿಗಳು ಸಮಾಲೋಚನೆ ನಡೆಸುತ್ತಿದ್ದಾರೆ. ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆ ಮಹಾ ಅಧಿವೇಶನದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನವಾಜ್ ಷರೀಫ್ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.