ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆಯಾದ ಐಎಸ್‌ಐ, ಪಂಜಾಬ್‌ನಲ್ಲಿ ಉಗ್ರವಾದಕ್ಕೆ ಪುನರ್ಜೀವ ನೀಡಲು ಯತ್ನಿಸುತ್ತಿದೆ ಎಂಬ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಹೇಳಿಕೆಯನ್ನು ಪಾಕಿಸ್ತಾನ ಅಲ್ಲಗಳೆದಿದೆ.
`ಅಂತಹ ಆರೋಪ ಮಾಡುವ ಮುನ್ನ ಭಾರತ ತನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಹಂಚಿಕೊಳ್ಳಬೇಕು. ಇಂತಹ ಹೇಳಿಕೆಗಳು ದ್ವಿಪಕ್ಷೀಯ ಸಂಬಂಧಕ್ಕೆ ಧಕ್ಕೆ ತರುತ್ತವೆ' ಎಂದು ಪಾಕಿಸ್ತಾನ ವಿದೇಶಾಂಗ ಇಲಾಖೆ ವಕ್ತಾರ ಐಜಾಜ್ ಅಹಮದ್ ಚೌಧರಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.