ADVERTISEMENT

ಶ್ರೀಲಂಕಾ ವಿರುದ್ಧ ವಿಶ್ವಸಂಸ್ಥೆ ತನಿಖೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2013, 19:59 IST
Last Updated 26 ಸೆಪ್ಟೆಂಬರ್ 2013, 19:59 IST

ವಿಶ್ವಸಂಸ್ಥೆ (ಎಪಿ/ಪಿಟಿಐ): ಶ್ರೀಲಂಕಾದಲ್ಲಿ ಎಲ್‌ಟಿಟಿಇ ವಿರುದ್ಧದ ಕಾರ್ಯಾಚರಣೆಯಲ್ಲಿ ಯುದ್ಧ ಅಪ­ರಾಧ ನಡೆದಿದೆ ಎನ್ನುವ ಆಪಾದನೆಗಳ ಬಗ್ಗೆ ಸ್ವತಂತ್ರ ಮತ್ತು ಸೂಕ್ತ ತನಿಖೆ ನಡೆ­ಸು­ವಂತೆ ಆ ದ್ವೀಪ ರಾಷ್ಟ್ರಕ್ಕೆ ಮನವರಿಕೆ ಮಾಡಿ­ಕೊಡಲು ಆಸ್ಟ್ರೇಲಿಯಾ ಮತ್ತು ಬ್ರಿಟನ್‌ಗೆ ಸೂಚಿಸಲಾಗಿದೆ ಎಂದು ವಿಶ್ವಸಂಸ್ಥೆ ಮೂಲಗಳು ತಿಳಿಸಿವೆ.

‌ಈ ಸಲಹೆಗೂ ಒಪ್ಪದಿದ್ದಲ್ಲಿ ಜಾಗತಿಕ ಮಟ್ಟದ ತನಿಖೆಗೆ ಆದೇಶಿಸಬೇಕಾಗು­ತ್ತದೆ ಎಂದೂ ವಿಶ್ವಸಂಸ್ಥೆ ಎಚ್ಚರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.