ADVERTISEMENT

ಸಂಯಮ ಕಾಪಾಡಲು ಚೀನಾ ಸಲಹೆ

ಪಿಟಿಐ
Published 21 ಸೆಪ್ಟೆಂಬರ್ 2016, 19:30 IST
Last Updated 21 ಸೆಪ್ಟೆಂಬರ್ 2016, 19:30 IST
ಸಂಯಮ ಕಾಪಾಡಲು ಚೀನಾ ಸಲಹೆ
ಸಂಯಮ ಕಾಪಾಡಲು ಚೀನಾ ಸಲಹೆ   

ಬೀಜಿಂಗ್‌ : ಭಾರತ ಮತ್ತು ಪಾಕಿಸ್ತಾನ ಸಂಯಮ ಕಾಪಾಡಿಕೊಂಡು ಮಾತುಕತೆ ಮೂಲಕ ವಿವಾದಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಚೀನಾ ಸಲಹೆ ನೀಡಿದೆ.

ಉರಿಯಲ್ಲಿ ಉಗ್ರರ ದಾಳಿ ನಡೆಸಿದ ನಂತರ ಉಭಯ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಚೀನಾ, ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಬೇಕು ಎಂದು ಕೋರಿದೆ.

‘ಭಾರತ ಮತ್ತು ಪಾಕಿಸ್ತಾನ  ಮುಖಂಡರು ನಿರಂತರ ಮಾತುಕತೆ ಮೂಲಕ ವಿವಾದಗಳನ್ನು ಬಗೆಹರಿಸಿಕೊಳ್ಳಬೇಕು’ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಲು ಕಾಂಗ್‌ ತಿಳಿಸಿದ್ದಾರೆ.

‘ಚೀನಾ ಎಲ್ಲ ರೀತಿಯ ಭಯೋತ್ಪಾದನೆಯನ್ನು ವಿರೋಧಿಸುತ್ತದೆ.  ಭಯೋತ್ಪಾದನೆ ನಿಗ್ರಹಿಸಲು ಅಂತರರಾಷ್ಟ್ರೀಯ ಮಟ್ಟದ ಸಹಕಾರವನ್ನು ಹೆಚ್ಚಿಸಬೇಕಾದ ಅಗತ್ಯವಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.