ADVERTISEMENT

ಸಂವಿಧಾನಕ್ಕೆ ತಿದ್ದುಪಡಿ: ಚೀನಾ ಸಮರ್ಥನೆ

ಪಿಟಿಐ
Published 4 ಮಾರ್ಚ್ 2018, 19:30 IST
Last Updated 4 ಮಾರ್ಚ್ 2018, 19:30 IST

ಬೀಜಿಂಗ್‌ : ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಅಧಿಕಾರಾವಧಿ ಮುಂದುವರಿಸುವ ನಿಟ್ಟಿನಲ್ಲಿ ಸಂವಿಧಾನಕ್ಕೆ ತಿದ್ದಪಡಿ ತರುವ ಕ್ರಮವನ್ನು ಸರ್ಕಾರ ಸಮರ್ಥಿಸಿಕೊಂಡಿದೆ.

ಆಡಳಿತಾರೂಢ ಕಮ್ಯುನಿಸ್ಟ್‌ ಪಕ್ಷದ ಅಧಿಕಾರ ಮತ್ತು ರಾಜ್ಯ ನಾಯಕತ್ವದ ಐಕ್ಯತೆಯನ್ನು ಎತ್ತಿಹಿಡಿಯುವ ಅಗತ್ಯವಿದೆ ಎಂದು ಹೇಳಿದೆ.

‘ಪಕ್ಷ ಮತ್ತು ಸೇನಾ ಮುಖ್ಯಸ್ಥರ ಅಧಿಕಾರ ಅವಧಿಗೆ ಯಾವುದೇ ಮಿತಿ ಇಲ್ಲ. ಆದರೆ, ಅಧ್ಯಕ್ಷರ ಅವಧಿಗೆ ಮಾತ್ರ ಮಿತಿ ಹೇರಲಾಗಿದೆ’ ಎಂದು ನ್ಯಾಷನಲ್‌ ಪೀಪಲ್ಸ್‌ ಕಾಂಗ್ರೆಸ್‌ನ ವಕ್ತಾರರು ತಿಳಿಸಿದ್ದಾರೆ.

ADVERTISEMENT

ಚೀನಾ ಸಂಸತ್ತು 2,980 ಪ್ರತಿನಿಧಿಗಳನ್ನು ಹೊಂದಿದ್ದು, ಸಂವಿಧಾನಕ್ಕೆ ತಿದ್ದುಪಡಿಯಾದರೆ ಕ್ಸಿ ಜಿನ್‌ಪಿಂಗ್‌ ಅವರು ಜೀವಿತಾವಧಿವರೆಗೆ ಅಧ್ಯಕ್ಷರಾಗಿ ಮುಂದುವರಿಯಲು ಅವಕಾಶ ದೊರೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.