ADVERTISEMENT

ಸಿಂಧು ಸೆಮಿಫೈನಲ್‌ಗೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2016, 19:30 IST
Last Updated 17 ಆಗಸ್ಟ್ 2016, 19:30 IST
ರಿಯೊದಲ್ಲಿ ಬುಧವಾರ ನಡೆದ ಮಹಿಳೆಯರ ಬ್ಯಾಡ್ಮಿಂಟನ್‌ನ ಸಿಂಗಲ್ಸ್‌ ವಿಭಾಗದ ಕ್ವಾರ್ಟರ್‌ ಫೈನಲ್‌ನಲ್ಲಿ ಚೀನಾದ ಯಿಹಾನ್‌ ವಾಂಗ್‌ ವಿರುದ್ಧ ಗೆದ್ದ ಭಾರತದ ಪಿ.ವಿ. ಸಿಂಧು ಆಟದ ವೈಖರಿ      ಪ್ರಜಾವಾಣಿ ಚಿತ್ರ/ ಕೆ.ಎನ್‌. ಶಾಂತಕುಮಾರ್‌
ರಿಯೊದಲ್ಲಿ ಬುಧವಾರ ನಡೆದ ಮಹಿಳೆಯರ ಬ್ಯಾಡ್ಮಿಂಟನ್‌ನ ಸಿಂಗಲ್ಸ್‌ ವಿಭಾಗದ ಕ್ವಾರ್ಟರ್‌ ಫೈನಲ್‌ನಲ್ಲಿ ಚೀನಾದ ಯಿಹಾನ್‌ ವಾಂಗ್‌ ವಿರುದ್ಧ ಗೆದ್ದ ಭಾರತದ ಪಿ.ವಿ. ಸಿಂಧು ಆಟದ ವೈಖರಿ ಪ್ರಜಾವಾಣಿ ಚಿತ್ರ/ ಕೆ.ಎನ್‌. ಶಾಂತಕುಮಾರ್‌   

ರಿಯೊ ಡಿ ಜನೈರೊ: ಒಲಿಂಪಿಕ್ಸ್‌ನಲ್ಲಿ ಮೊದಲ ಪದಕದ ನಿರೀಕ್ಷೆಯಲ್ಲಿರುವ ಪಿ.ವಿ. ಸಿಂಧು ಅವರು ಮಹಿಳೆಯರ ಬ್ಯಾಡ್ಮಿಂಟನ್‌ನ ಸಿಂಗಲ್ಸ್‌ ವಿಭಾಗದಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದಾರೆ.

ಬುಧವಾರ ನಡೆದ ಕ್ವಾರ್ಟರ್‌ ಫೈನಲ್‌ನಲ್ಲಿ ಸಿಂಧು 22–20, 21–19 ರಲ್ಲಿ ಚೀನಾದ ಯಿಹಾನ್‌ ವಾಂಗ್‌ಗೆ ಆಘಾತ ನೀಡಿದರು.

ಶ್ರೀಕಾಂತ್‌ಗೆ ನಿರಾಸೆ: ಪುರುಷರ ಸಿಂಗಲ್ಸ್‌ನಲ್ಲಿ ಭಾರತದ ಭರವಸೆ ಎನಿ ಸಿದ್ದ ಕೆ.ಶ್ರೀಕಾಂತ್‌ ಕ್ವಾರ್ಟರ್‌ ಫೈನಲ್‌ನಲ್ಲಿ   6–21, 21–11, 18–21ರಲ್ಲಿ ಚೀನಾದ ಲಿನ್‌ ಡಾನ್‌ ವಿರುದ್ಧ ಮಣಿದರು.

ಮಹಿಳೆಯರ ಕುಸ್ತಿ ಸ್ಪರ್ಧೆಯಲ್ಲಿ ಭಾರತದ ಸವಾಲು ಎತ್ತಿಹಿಡಿದಿದ್ದ ಸಾಕ್ಷಿ ಮಲಿಕ್‌ ಮತ್ತು ವಿನೇಶ ಪೋಗಟ್‌ ಕ್ವಾರ್ಟರ್‌ ಫೈನಲ್‌ನಲ್ಲೇ ನಿರ್ಗಮಿಸಿದರು.

ಮಹಿಳೆಯರ 800 ಮೀಟರ್ಸ್ ಓಟದಲ್ಲಿ ಭಾಗವಹಿಸಿದ್ದ ಟಿಂಟು ಲೂಕ ಒಟ್ಟಾರೆ 29ನೇ ಸ್ಥಾನದೊಂದಿಗೆ ಸ್ಪರ್ಧೆ ಕೊನೆಗೊಳಿಸಿದರು.

‘ಖೇಲ್‌ ರತ್ನ’ಕ್ಕೆ ಜಿತು, ದೀಪಾ
ಪಿಸ್ತೂಲ್‌ ಶೂಟರ್‌ ಜಿತು ರಾಯ್‌ ಮತ್ತು ರಿಯೊ ಒಲಿಂಪಿಕ್ಸ್‌ನಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದ ಜಿಮ್ನಾಸ್ಟಿಕ್ಸ್‌ ಪಟು ದೀಪಾ ಕರ್ಮಾ ಕರ್‌ ಅವರ ಹೆಸರನ್ನು ಪ್ರತಿಷ್ಠಿತ ರಾಜೀವ್‌ಗಾಂಧಿ ಖೇಲ್‌ರತ್ನ ಪುರಸ್ಕಾರಕ್ಕೆ ಶಿಫಾರಸು ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.