ಇಸ್ಲಾಮಾಬಾದ್ (ಪಿಟಿಐ): ಪ್ರಪಂಚದಲ್ಲೇ ಅತ್ಯಂತ ಕಡಿಮೆ ತಾಪಮಾನ ಇರುವ ಯುದ್ಧಭೂಮಿ ಎಂದೇ ಹೆಸರಾದ ಸಿಯಾಚಿನ್‌ನಲ್ಲಿ ಸಂಭವಿಸಿದ ಭಾರಿ ಹಿಮಪಾತದಲ್ಲಿ ನೂರಾರು ಪಾಕ್ ಸೈನಿಕರು ಹಿಮಸಮಾಧಿಯಾಗಿದ್ದು, ಇನ್ನೂ ಹಲವಾರು ಮಂದಿ ಅಪಾಯದಲ್ಲಿ ಸಿಲುಕಿದ್ದಾರೆ.
ಶನಿವಾರ ಬೆಳಿಗ್ಗೆ 6 ಗಂಟೆ ಹೊತ್ತಿಗೆ ಸಿಯಾಚಿನ್‌ನಲ್ಲಿದ್ದ ಪಾಕ್ ಸೈನಿಕರ ಶಿಬಿರದ ಮೇಲೆ ಭಾರಿ ಪ್ರಮಾಣದಲ್ಲಿ ಹಿಮಪಾತವಾಯಿತೆಂದು ಸುದ್ದಿವಾಹಿನಿಗಳು ವರದಿ ಮಾಡಿವೆ.
ಈಗಾಗಲೇ ಹೆಚ್ಚುವರಿ ಪಡೆಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿದ್ದು, ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದು ಮಿಲಿಟರಿ ವಕ್ತಾರರು ತಿಳಿಸಿದ್ದಾರೆ.
ಸುಮಾರು 135ಕ್ಕೂ ಹೆಚ್ಚಿನ ಸೈನಿಕರು ಹಿಮಸಮಾಧಿಯಾಗಿರಬಹುದೆಂದು ಅನಧಿಕೃತ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.