ADVERTISEMENT

ಸಿರಿಯಾದಲ್ಲಿ ಬಾಂಬ್ ಸ್ಫೋಟಕ್ಕೆ 10 ಬಲಿ

​ಪ್ರಜಾವಾಣಿ ವಾರ್ತೆ
Published 6 ಜನವರಿ 2012, 19:30 IST
Last Updated 6 ಜನವರಿ 2012, 19:30 IST

ಡಮಾಸ್ಕಸ್ (ಎಪಿ): ಸಿರಿಯಾ ರಾಜಧಾನಿಯ ಮಧ್ಯಭಾಗದಲ್ಲಿ ಪೊಲೀಸ್ ವಾಹನವೊಂದರ ಬಳಿ  ಸ್ಫೋಟ ಸಂಭವಿಸಿದ್ದರಿಂದ ಕನಿಷ್ಠ ಪಕ್ಷ 10 ಮಂದಿ ಸತ್ತಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಆದರೆ ಸತ್ತವರ ಸಂಖ್ಯೆ ಇನ್ನೂ ಜಾಸ್ತಿ ಇದೆ ಎಂದು ಹೇಳಲಾಗುತ್ತಿದೆ.

ಆತ್ಮಾಹುತಿ ದಳದ ವ್ಯಕ್ತಿ ಪೊಲೀಸ್ ವಾಹನದ ಬಳಿ ಸ್ಫೋಟಿಸಿಕೊಂಡಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.