
ಪ್ರಜಾವಾಣಿ ವಾರ್ತೆಹ್ಯೂಸ್ಟನ್ (ಪಿಟಿಐ): ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಕಮಾಂಡರ್ ಆಗಿರುವ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ ಗುರುವಾರ 7ನೇ ಬಾರಿ ಬಾಹ್ಯಾಕಾಶ ನಡಿಗೆ ಮಾಡಿದ್ದು, ಆ ಮೂಲಕ ದಾಖಲೆ ಸೃಷ್ಟಿಸಿದ್ದಾರೆ.
ಬಹುಮುಖ್ಯವಾದ ರೇಡಿಯೇಟರ್ ವ್ಯವಸ್ಥೆಯಲ್ಲಿ ಅಮೋನಿಯಾ ಸೋರಿಕೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಸುನೀತಾ ಫ್ಲೈಟ್ ಎಂಜಿನಿಯರ್ ಅಕಿ ಹೊಶಿಡೆ ಅವರ ಜತೆಗೂಡಿ ಈ ಬಾಹ್ಯಾಕಾಶ ನಡಿಗೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.