ADVERTISEMENT

ಸುಮಾತ್ರ ಬಳಿ ಭೂಕಂಪ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2012, 19:30 IST
Last Updated 7 ಏಪ್ರಿಲ್ 2012, 19:30 IST

ಜಕಾರ್ತ (ಎಎಫ್‌ಪಿ): ಪಶ್ಚಿಮ ಇಂಡೋನೇಷ್ಯಾದಲ್ಲಿ ಶನಿವಾರ ಮುಂಜಾನೆ ಭೂಕಂಪ ಸಂಭವಿಸಿದೆ.
ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5.5ರಷ್ಟು ದಾಖಲಾಗಿದೆ ಎಂದು ಅಮೆರಿಕದ ಭೂ ಸರ್ವೇಕ್ಷಣಾ ಇಲಾಖೆ ತಿಳಿಸಿದೆ. ಆದರೆ, ಸುನಾಮಿ ಸಂಭವಿಸುವ ಯಾವುದೇ ಮುನ್ಸೂಚನೆ ಇಲ್ಲ ಎಂದಿದೆ.

ಸುಮಾತ್ರ ದ್ವೀಪದಿಂದ 209 ಕಿ.ಮೀ ದೂರದಲ್ಲಿರುವ ಮೆಂಟವಾಯ್ ದ್ವೀಪದ ಸಮುದ್ರದಲ್ಲಿ ಒಂದು ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಇತ್ತು. ಘಟನೆಯಿಂದ ಯಾವುದೇ ಸಾವು-ನೋವು ಸಂಭವಿಸಿದ ವರದಿಯಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.