ಮೊಗದಿಶು: ಸೊಮಾಲಿಯದ ಹೊರವಲಯದ ಸಿಂಕಾ ಧೇರ್ನಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಮೂವರು ನಾಗರಿಕರು ಗಾಯಗೊಂಡಿದ್ದಾರೆ.
ಸಿಂಕಾ ಧೇರ್ ವಲಯದಲ್ಲಿ ಕಾರಿನಲ್ಲಿ ಕುಳಿತುಕೊಂಡಿದ್ದ ಆತ್ಮಾಹುತಿ ಬಾಂಬ್ ದಾಳಿಕೋರ ಸ್ವಯಂ ಸ್ಫೋಟಿಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಅಲ್–ಶಬಾದ್ ಉಗ್ರ ಸಂಘಟನೆ ಈ ದಾಳಿಯ ಹೊಣೆ ಹೊತ್ತಿದೆ. ದಾಳಿಕೋರರು ಭದ್ರತಾ ತಪಾಸಣಾ ಸ್ಥಳವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ ಎಂದು ಸೊಮಾಲಿಯಾ ಪೊಲೀಸರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.