ADVERTISEMENT

ಸ್ಪೀಕರ್ ಆದೇಶ ಪ್ರಶ್ನಿಸಿ ಕೋರ್ಟ್‌ನಲ್ಲಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 28 ಮೇ 2012, 19:30 IST
Last Updated 28 ಮೇ 2012, 19:30 IST

ಇಸ್ಲಾಮಾಬಾದ್ (ಪಿಟಿಐ): ನ್ಯಾಯಾಲಯ ನಿಂದನೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾದ ಕಾರಣಕ್ಕೆ ಪ್ರಧಾನಿ ಯುಸೂಫ್ ರಜಾ ಗಿಲಾನಿ ಅವರನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ ಎಂಬ ಸ್ಪೀಕರ್ ಫೆಹಮಿದಾ ಮಿರ್ಜಾ ಅವರ ತೀರ್ಮಾನವನ್ನು ವಿರೋಧ ಪಕ್ಷಗಳಾದ ಪಿಎಂಎಲ್-ಎನ್ ಮತ್ತು ತೆಹರಿಕ್-ಎ-ಇನ್ಸಾಫ್  ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿವೆ.

ಪಿಎಂಎಲ್-ಎನ್ ಸಂಸದ ಖ್ವಾಜಾ ಆಸಿಫ್ ಪಕ್ಷದ ಪರವಾಗಿ ಸುಪ್ರೀಂಕೋರ್ಟ್‌ನಲ್ಲಿ ಸ್ಪೀಕರ್ ಆದೇಶದ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದಾರೆ. ತೆಹರಿಕ್-ಎ-ಇನ್ಸಾಫ್ ಪಕ್ಷ ಸಹ ಇದೇ ರೀತಿಯ ಅರ್ಜಿಯನ್ನು ಸಲ್ಲಿಸಿದೆ. ಎರಡೂ ಅರ್ಜಿಗಳಲ್ಲಿ ಪ್ರಧಾನಿ, ಸ್ಪೀಕರ್, ಸರ್ಕಾರ ಮತ್ತು ಚುನಾವಣಾ ಆಯೋಗವನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.