ADVERTISEMENT

ಸ್ವದೇಶಕ್ಕೆ ಮರಳಲು ಮುಷರಫ್ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2011, 19:30 IST
Last Updated 17 ಸೆಪ್ಟೆಂಬರ್ 2011, 19:30 IST

ಲಾಹೋರ್, (ಪಿಟಿಐ): ದೇಶಭ್ರಷ್ಟರಾಗಿ ಬ್ರಿಟನ್ ಮತ್ತು ದುಬೈಯಲ್ಲಿ ವಾಸವಾಗಿರುವ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೆಜ್ ಮುಷರಫ್ ಅವರು ದೇಶಕ್ಕೆ ಮರಳಿದ ನಂತರ ಅಗತ್ಯ ಭದ್ರತಾ ವ್ಯವಸ್ಥೆಗಾಗಿ ಅಮೆರಿಕ ಮತ್ತು ಬ್ರಿಟನ್ ಭದ್ರತಾ ಸಂಸ್ಥೆಗಳನ್ನು ಸಂಪರ್ಕಿಸಿದ್ದಾರೆ.

ಮುಂದಿನ ವರ್ಷದ ಆರಂಭದಲ್ಲಿ ಪಾಕಿಸ್ತಾನಕ್ಕೆ ಮರಳುವ ಉದ್ದೇಶ ಹೊಂದಿರುವ ಅವರು ಅಖಿಲ ಪಾಕಿಸ್ತಾನ ಮುಸ್ಲಿಂ ಲೀಗ್ (ಎಪಿಎಂಎಲ್) ಸಭೆಯನ್ನು ಈ ತಿಂಗಳ 18ರಂದು ದುಬೈಯಲ್ಲಿ ಕರೆದಿದ್ದು, ಈ ಸಭೆಗೆ ಪಕ್ಷದ ಪಾಕಿಸ್ತಾನ, ಅಮೆರಿಕ, ಕೆನಡಾ ಮತ್ತು ಬ್ರಿಟನ್‌ನ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಅವರು ಸ್ವದೇಶಕ್ಕೆ ಮರಳುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದು, ಪಕ್ಷದ ಇತರ ವಿಚಾರಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಮುಷರಫ್ ಅವರ ಆಪ್ತರು ತಿಳಿಸಿದ್ದಾರೆ.

ಮುಷರಫ್ ಅವರು ಪಾಕಿಸ್ತಾನಕ್ಕೆ ಮರಳಿದ ನಂತರ ಖಾಸಗಿ ಭದ್ರತಾ ಸಂಸ್ಥೆಗಳಲ್ಲದೆ ಪಾಕಿಸ್ತಾನ ಸೇನೆ ಸಹ ಬಿಗಿ ಭದ್ರತೆ ಒದಗಿಸಲಿದೆ ಎಂದು ಎಪಿಎಂಎಲ್ ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.