ADVERTISEMENT

ಹಸ್ತಾಂತರ ಪ್ರಶ್ನಿಸಿ ಶಂಕರನ್ ಮೇಲ್ಮನವಿ

​ಪ್ರಜಾವಾಣಿ ವಾರ್ತೆ
Published 4 ಜೂನ್ 2013, 19:59 IST
Last Updated 4 ಜೂನ್ 2013, 19:59 IST

ಲಂಡನ್ (ಪಿಟಿಐ): ಸೇನೆಯ ರಹಸ್ಯ ಮಾಹಿತಿ ಸೋರಿಕೆ ಆರೋಪದ ವಿಚಾರಣೆಗಾಗಿ ತಮ್ಮನ್ನು ಭಾರತಕ್ಕೆ ಹಸ್ತಾಂತರಿಸುತ್ತಿರುವ ಬ್ರಿಟನ್ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ರವಿಶಂಕರನ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.

ಶಂಕರನ್ ಅವರನ್ನು ಭಾರತದ ವಶಕ್ಕೆ ಒಪ್ಪಿಸಲು ಬ್ರಿಟನ್ ಗೃಹ ಕಾರ್ಯದರ್ಶಿ ಥೆರೇಸಾ ಅವರು ಈಗಾಗಲೇ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಶಂಕರನ್, ನೌಕಾಪಡೆ ಮಾಜಿ ಮುಖ್ಯಸ್ಥ ಅಡ್ಮಿರಲ್ ಅರುಣ್ ಪ್ರಕಾಶ್ ಅವರ ಹತ್ತಿರದ ಸಂಬಂಧಿ. ನೌಕಾಪಡೆ ಯುದ್ಧ ಕೊಠಡಿಯ ರಹಸ್ಯ ಮಾಹಿತಿ ಸೋರಿಕೆ ಆರೋಪ ಶಂಕರನ್ ಮೇಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.