ADVERTISEMENT

ಹುದ್ದೆಯಿಂದ ಕೆಳಗಿಳಿದ ಮುಖ್ಯಸ್ಥ

​ಪ್ರಜಾವಾಣಿ ವಾರ್ತೆ
Published 10 ಜನವರಿ 2012, 19:30 IST
Last Updated 10 ಜನವರಿ 2012, 19:30 IST

ವಾಷಿಂಗ್ಟನ್ (ಐಎಎನ್‌ಎಸ್):  ಶ್ವೇತ ಭವನದ ಸಿಬ್ಬಂದಿ ವಿಭಾಗದ ಮುಖ್ಯಸ್ಥ ವಿಲಿಯಮ್ ಡಾಲೆಯ್ ಅವರನ್ನು ಆ ಸ್ಥಾನದಿಂದ ಮುಕ್ತಗೊಳಿಸಲಾಗಿದೆ ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ.

ಜಾಕೋಬ್ ಲೀವ್ ಅವರನ್ನು ನೂತನ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ ಎಂದು ಹೇಳಿರುವ ಅಧ್ಯಕ್ಷ ಬರಾಕ್ ಒಬಾಮ, ಡಾಲೆಯ್ ಅವರ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ಡಾಲೆಯ್ ಅವರು ಶ್ವೇತಭವನ ಕೈಗೊಳ್ಳುವ ಪ್ರಮುಖ ನಿರ್ಧಾರಗಳಲ್ಲಿ  ಹಾಗೂ ಅದರ ನಿರ್ವಹಣೆಯಲ್ಲಿ ಭಾಗಿಯಾಗುತ್ತಿದ್ದರು ಎಂದು ಸ್ಮರಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.