ಡಲ್ಲಾಸ್ (ಪಿಟಿಐ): ‘ಕಠಿಣ ಆರ್ಥಿಕ ಸುಧಾರಣೆ ಕ್ರಮಗಳನ್ನು ಕೈಗೊಂಡು ಅಮೆರಿಕದಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗುವುದು’ ಎಂದು ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಭರವಸೆ ನೀಡಿದ್ದಾರೆ.
‘ದೇಶದಲ್ಲಿನ ನಿರುದ್ಯೋಗ ಸಮಸ್ಯೆಯಿಂದ ಚೀನಾದಂತಹ ದೇಶಗಳಿಗೆ ವಲಸೆ ಹೋಗಿರುವ ಯುವಕರನ್ನು ಮರಳಿ ಕರೆತರಲಾಗುವುದು’ ಎಂದು ಪೆನ್ನಸ್ಯಿಲ್ವಾನಿಯಾದ ಈರಿಯಲ್ಲಿ ಶನಿವಾರ ನಡೆದ ನಡೆದ ಚುನಾವಣಾ ರ್‍ಯಾಲಿಯಲ್ಲಿ ತಿಳಿಸಿದ್ದಾರೆ.
‘ಅಮೆರಿಕದಲ್ಲಿ ಉದ್ಯೋಗಾವಕಾಶಗಳು ಇಲ್ಲದಂತಾಗಿವೆ. ಬೇರೆ ಬೇರೆ ದೇಶಗಳಲ್ಲಿ ಬಂಡವಾಳ ಹೂಡಿಕೆ ಮಾಡಿ ಕಂಪೆನಿಗಳನ್ನು ಸ್ಥಾಪಿಸಲಾಗುತ್ತಿದೆ. ಇದರಿಂದ ಉದ್ಯೋಗಗಳು ಸಹ ಆ ದೇಶಗಳಲ್ಲಿ ಸೃಷ್ಟಿಯಾಗುತ್ತಿವೆ. ಹೀಗಾಗಿ ಅಮೆರಿಕದಲ್ಲಿಯೇ ಈ ಕಂಪೆನಿಗಳನ್ನು ಉಳಿಸಿಕೊಳ್ಳಲಾಗುವುದು’ ಎಂದು ಟ್ರಂಪ್ ತಿಳಿಸಿದ್ದಾರೆ.
‘ಡೆಮಾಕ್ರಟಿಕ್ ಪಕ್ಷದ ಮುಖಂಡರ ಹುಸಿ ಭರವಸೆಗಳಿಂದ ಅಮೆರಿಕನ್ನರು ಹತಾಶೆಗೊಂಡಿದ್ದಾರೆ’ ಎಂದು ಟ್ರಂಪ್ ವ್ಯಂಗ್ಯವಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.