ಲಂಡನ್ (ಪಿಟಿಐ): ಅಗತ್ಯಕ್ಕಿಂತ ಹೆಚ್ಚು ವ್ಯಾಯಾಮ ಮಾಡುವುದರಿಂದ ಹೃದಯಕ್ಕೆ ಅಪಾಯವಾಗುವ ಸಂಭವ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಒಂದು ಗಂಟೆ ಅಥವಾ ಎರಡು ಗಂಟೆಗಿಂತ ಹೆಚ್ಚು ಸಮಯ ನಿರಂತರವಾಗಿ ವ್ಯಾಯಾಮ ಮಾಡುವುದರಿಂದ ಹೃದಯ ಬಡಿತದಲ್ಲಿ ಅಪಾಯಕಾರಿ ಬದಲಾವಣೆಯಾಗುವ ಸಾಧ್ಯತೆ ಹೆಚ್ಚು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
`ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಲು ದಿನಕ್ಕೆ 30ರಿಂದ 50 ನಿಮಿಷಗಳ ಕಾಲ ವ್ಯಾಯಾಮ ಅಗತ್ಯ' ಎಂದು ಹೃದ್ರೋಗ ತಜ್ಞರಾದ ಜೇಮ್ಸ ಒ ಕಿಫ್ ಮತ್ತು ಕಾರ್ಲ್ ಲೇವಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.