ADVERTISEMENT

ಹೆಚ್ಚಿನ ಚಿಕಿತ್ಸೆಗಾಗಿ ಮಲಾಲ ಬ್ರಿಟನ್‌ಗೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2012, 10:25 IST
Last Updated 15 ಅಕ್ಟೋಬರ್ 2012, 10:25 IST

 ಇಸ್ಲಾಮಾಬಾದ್(ಪಿಟಿಐ) : ತಾಲಿಬಾನ್ ಉಗ್ರರ ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿರುವ ಪಾಕಿಸ್ತಾನದ ಬಾಲಕಿ ಮಲಾಲ ಯೂಸುಫ್ ಝೈ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೋಮವಾರ ವಿಮಾನದ ಮೂಲಕ ಬ್ರಿಟನ್ ಗೆ ಕಳುಹಿಸಲಾಯಿತು.

ಹದಿಹರೆಯದ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕಿಗಾಗಿ ಹೋರಾಟ ನಡೆಸಿರುವ ಬಾಲಕಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಬ್ರಿಟನ್ ತಾನಾಗಿಯೇ ಮುಂದೆ ಬಂದ ಹಿನ್ನೆಲೆಯಲ್ಲಿ ಈ ದಿನ ಈ ಕ್ರಮ ಕೈಗೊಳ್ಳಲಾಯಿತು ಎಂದು ಪಾಕಿಸ್ತಾನ ಸೇನಾ ಮೂಲಗಳು ತಿಳಿಸಿವೆ.

ಮಲಾಲ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ಕಳಿಸಲು  ಏರ್ ಅಂಬುಲೆನ್ಸ್ ನಲ್ಲೇ ಅಗತ್ಯ ಪ್ರಾಥಮಿಕ ಚಿಕಿತ್ಸೆ ನೀಡಿ ಕಳುಹಿಸಿಕೊಡಲಾಗಿದೆ ಎಂದು ಮೂಲಗಳು ಹೇಳಿವೆ.

ಮಲಾಲ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸುವುದು ಎಂದು ಮೂಲಗಳು ತಿಳಿಸಿವೆ.
 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.