ADVERTISEMENT

ಹೆಡ್ಲಿ ವಿಚಾರಣೆಗೆ ಭಾರತದ ಒತ್ತಾಯ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2013, 19:30 IST
Last Updated 12 ಡಿಸೆಂಬರ್ 2013, 19:30 IST

ವಾಷಿಂಗ್ಟನ್‌ (ಪಿಟಿಐ): ಮುಂಬೈ ದಾಳಿಯ ಸಂಚು ರೂಪಿಸಿ, ಅಮೆರಿಕದಲ್ಲಿ ಜೈಲು ಶಿಕ್ಷೆಗೆ ಒಳಗಾಗಿರುವ ಭಯೋತ್ಪಾದಕ ಡೇವಿಡ್‌ ಹೆಡ್ಲಿಯ ವಿಚಾರಣೆಗೆ ಅವಕಾಶ ಕಲ್ಪಿಸುವಂತೆ ಭಾರತ ಅಮೆರಿಕವನ್ನು ಒತ್ತಾಯಿಸಿದೆ.

ನಾಲ್ಕು ದಿನಗಳ ಅಮೆರಿಕ ಪ್ರವಾಸದಲ್ಲಿದ್ದ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್‌ ಅಮೆರಿಕದ ಹಿರಿಯ ಅಧಿಕಾರಿಗಳನ್ನು ಭೇಟಿಯಾದ ಸಂದರ್ಭದಲ್ಲಿ ಈ ಬೇಡಿಕೆ ಮಂಡಿಸಿದ್ದಾರೆ.

  ಭಾರತದ ತನಿಖಾ ಸಂಸ್ಥೆಗಳಿಗೆ ಹೆಡ್ಲಿ ವಿಚಾರಣೆಗೆ ಅವಕಾಶ ಮಾಡಿಕೊಡುವ ಕುರಿತು ಅಮೆರಿಕ ಯಾವುದೇ ಬದ್ಧತೆ ವ್ಯಕ್ತಪಡಿಸಿಲ್ಲ. ಆದರೆ, ಮುಂಬೈ ದಾಳಿಯ ಸಂಚು ರೂಪಿಸಿದವರಿಗೆ ಶಿಕ್ಷೆ ನೀಡುವಂತೆ ಪಾಕ್‌ ಮೇಲೆ ಒತ್ತಡ ತರುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.