ADVERTISEMENT

ಹೊಸ್ನಿ ಮುಬಾರಕ್‌ ಮತ್ತೆ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2013, 19:30 IST
Last Updated 15 ಡಿಸೆಂಬರ್ 2013, 19:30 IST

ಕೈರೊ (ಪಿಟಿಐ): 2011ರಲ್ಲಿ ನಡೆದ ಕ್ರಾಂತಿ ಸಂದರ್ಭದಲ್ಲಿ ಪ್ರತಿಭಟನಾಕಾರ­ರನ್ನು ಹತ್ಯೆ ಮಾಡಿಸಿದ ಪ್ರಕರಣದಲ್ಲಿ ಈಜಿಪ್ಟ್ ಮಾಜಿ ಅಧ್ಯಕ್ಷ ಹೋಸ್ನಿ ಮುಬಾರಕ್‌ ಅವರನ್ನು ಕ್ರಿಮಿನಲ್‌ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಭಾನುವಾರ ವರದಿಯಾಗಿದೆ.

ಸೈನ್ಯದ ಮಾಜಿ ಮುಖ್ಯಸ್ಥ ಸಮಿ ಅನನ್‌ ಗೌಪ್ಯ ವಿಚಾರಣೆ ಸಂದರ್ಭದಲ್ಲಿ ಮುಬಾರಕ್‌ ವಿರುದ್ಧ ಸಾಕ್ಷಿ ಹೇಳಲಿದ್ದಾರೆ. ಅಲ್ಲದೇ, ಅಂತರರಾಷ್ಟ್ರೀಯ ಮಾರು­ಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ಇಸ್ರೇಲ್‌ಗೆ ಅನಿಲ ಮಾರಾಟ ಮಾಡಿ ಆಪಾದನೆ ಕೂಡ ಮುಬಾರಕ್‌ ಮೇಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT