ADVERTISEMENT

ಪಾಕಿಸ್ತಾನದಲ್ಲಿ ಭಯೋತ್ಪಾದಕರ ದಾಳಿ; 10 ಪೊಲೀಸರು ಬಲಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2024, 13:56 IST
Last Updated 5 ಫೆಬ್ರುವರಿ 2024, 13:56 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಪೆಶಾವರ: ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶಸ್ತ್ರಸಜ್ಜಿತ ಭಯೋತ್ಪಾದಕರು ಸೋಮವಾರ ಪೊಲೀಸ್ ಠಾಣೆಯ ಮೇಲೆ ನಡೆಸಿದ ದಾಳಿಗೆ 10 ಮಂದಿ ಪೊಲೀಸರು ಬಲಿಯಾಗಿದ್ದು ಆರು ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಪಾಕಿಸ್ತಾನದಲ್ಲಿ ಫೆಬ್ರುವರಿ 8ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಅದಕ್ಕೆ ಮೂರು ದಿನಗಳ ಮೊದಲು ಈ ದಾಳಿ ನಡೆದಿದೆ.

ದೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ಈ ದಾಳಿ ನಡೆದಿದೆ. ದಾಳಿಗೆ ಇದುವರೆಗೆ ಯಾರೂ ಹೊಣೆ ಹೊತ್ತಿಲ್ಲ. ಭಾರಿ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಭಯೋತ್ಪಾದಕರು ಹಠಾತ್ತನೆ ದಾಳಿ ನಡೆಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ನಸೀರ್ ಮೆಹ್ಮೂದ್ ಹೇಳಿದ್ದಾರೆ.

ADVERTISEMENT

ಭಯೋತ್ಪಾದಕರು ಪೊಲೀಸ್ ಠಾಣೆಯ ಮೇಲೆ ಎಲ್ಲ ದಿಕ್ಕುಗಳಿಂದಲೂ ದಾಳಿ ನಡೆಸಿದರು. ಪೊಲೀಸರು ಕೂಡ ಪ್ರತಿದಾಳಿ ನಡೆಸಿದರಾದರೂ, ಭಯೋತ್ಪಾದಕರು ತಪ್ಪಿಸಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.