ADVERTISEMENT

ಕೋವಿಡ್‌: ಪಾಕ್‌ನಲ್ಲಿ 11 ನ್ಯಾಯಾಲಯಗಳು ಬಂದ್‌

ಪಿಟಿಐ
Published 30 ಅಕ್ಟೋಬರ್ 2020, 12:02 IST
Last Updated 30 ಅಕ್ಟೋಬರ್ 2020, 12:02 IST
corona
corona   

ಇಸ್ಲಾಮಾಬಾದ್‌: ನ್ಯಾಯಾಧೀಶರು ಹಾಗೂ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಕಾರಣ ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ11 ನ್ಯಾಯಾಲಯಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

‘ಇಸ್ಲಾಮಾಬಾದ್‌ನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ಅಧೀನದಲ್ಲಿ ಒಟ್ಟು 70 ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿವೆ.12ಮಂದಿ ನ್ಯಾಯಾಧೀಶರು ಮತ್ತು ಸಿಬ್ಬಂದಿಗೆ ಕೋವಿಡ್‌ ದೃಢಪಟ್ಟಿದೆ. ಕೆಲ ವಕೀಲರಿಗೂ ಸೋಂಕು ತಗುಲಿದೆ. ಹೀಗಾಗಿ 11 ನ್ಯಾಯಾಲಯಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. 14 ದಿನಗಳ ನಂತರ ಇವು ಕಾರ್ಯಾರಂಭ ಮಾಡಲಿವೆ’ ಎಂದು ಇಸ್ಲಾಮಾಬಾದ್‌ ವಕೀಲರ ಸಂಘದ ಕಾರ್ಯದರ್ಶಿ ನಬೀಲ್‌ ತಾಹೀರ್‌ ಮಿರ್ಜಾ ಶುಕ್ರವಾರ ಹೇಳಿದ್ದಾರೆ.

‘ಕೋವಿಡ್‌ ಹಿನ್ನೆಲೆಯಲ್ಲಿ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ಯಾರೂ ಪಾಲಿಸುತ್ತಿಲ್ಲ. ಹೀಗಾಗಿ ಎಲ್ಲರೂ ಸೋಂಕಿತರಾಗುತ್ತಿದ್ದಾರೆ. ಇನ್ನು ಮುಂದಾದರೂ ಎಲ್ಲಾ ವಕೀಲರು ಕಡ್ಡಾಯವಾಗಿ ಮುಖಗವಸು ಧರಿಸಬೇಕು’ ಎಂದು ಸಂಘವು ಮನವಿ ಮಾಡಿದೆ.

ADVERTISEMENT

‘ರಸ್ತೆ ಹಾಗೂ ಮಾರುಕಟ್ಟೆಗಳಲ್ಲಿ ಜನ ಮುಖಗವಸು ಧರಿಸದೇ ಅಡ್ಡಾಡುತ್ತಿದ್ದಾರೆ. ಅವರಿಗೆ ದಂಡ ವಿಧಿಸಲಾಗಿದೆ. ಕೋವಿಡ್‌ ಮಾರ್ಗಸೂಚಿ ಉಲ್ಲಂಘಿಸಿದ ಕಾರಣ ಏಳು ಅಂಗಡಿಗಳಿಗೆ ಬೀಗ ಹಾಕಲಾಗಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ಗುರುವಾರ ಹೊಸದಾಗಿ154 ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು ಒಬ್ಬರು ಸತ್ತಿದ್ದಾರೆ. ಇದರೊಂದಿಗೆ ಸತ್ತವರ ಸಂಖ್ಯೆ215ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.