ಬೀಜಿಂಗ್: ಪೂರ್ವ ಚೀನಾದ ಜಿಯಾಂಗ್ಸು ಪ್ರಾಂತ್ಯದಹೆದ್ದಾರಿಯಲ್ಲಿ ಭಾನುವಾರ ಮುಂಜಾನೆ ಟ್ರಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಇದರಲ್ಲಿ 11 ಮಂದಿ ಮೃತಪಟ್ಟಿದ್ದು, 19 ಜನರಿಗೆ ಗಾಯಗಳಾಗಿವೆ.
‘ನಿಯಂತ್ರಣ ತಪ್ಪಿ ಟ್ರಕ್ ರಸ್ತೆ ವಿಭಜಕವನ್ನು ದಾಟಿ ಬಂದು ಶೆನ್ಯಾಂಗ್-ಹೈಕೌ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಪಲ್ಟಿಯಾದ ಬಸ್, ಇತರೆ ಎರಡು ಟ್ರಕ್ಗಳಿಗೆ ಗುದ್ದಿದೆ ’ ಎಂದು ಸರ್ಕಾರಿ ಸುದ್ದಿ ಸಂಸ್ಥೆ ಶಿನ್ಹುವಾ ವರದಿ ಮಾಡಿದೆ.
‘ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಬಗ್ಗೆ ವಿಚಾರಣೆ ಮುಂದುವರಿದಿದೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.