ADVERTISEMENT

ಸಿರಿಯಾದಲ್ಲಿನ ಇರಾನ್ ರಾಯಭಾರ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 11 ಜನ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಏಪ್ರಿಲ್ 2024, 5:14 IST
Last Updated 2 ಏಪ್ರಿಲ್ 2024, 5:14 IST
<div class="paragraphs"><p> ಇರಾನ್ ರಾಯಭಾರ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ</p></div>

ಇರಾನ್ ರಾಯಭಾರ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ

   

( ರಾಯಿಟರ್ಸ್‌ ಚಿತ್ರ)

ಟೆಹರಾನ್: ಡಮಾಸ್ಕಸ್‌ನಲ್ಲಿರುವ ಇರಾನ್ ರಾಯಭಾರ ಕಚೇರಿಯ ಮೇಲೆ ಇಸ್ರೇಲ್ ಸೋಮವಾರ ವೈಮಾನಿಕ ದಾಳಿ ನಡೆಸಿದ್ದು, 11 ಜನ ಮೃತಪಟ್ಟಿದ್ದಾರೆ ಎಂದು ಎನ್‌ಡಿ ಟಿವಿ ವರದಿ ಮಾಡಿದೆ.

ADVERTISEMENT

ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಜಹೇದಿ ಮತ್ತು ಇನ್ನೊಬ್ಬ ಉನ್ನತ ಶ್ರೇಣಿಯ ಅಧಿಕಾರಿ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ಹಾದಿ ಹಾಜಿ ರಹೀಮಿ ಹಾಗೂ 7 ಮಂದಿ ಸದಸ್ಯರು ಹತ್ಯೆಯಾದವರಲ್ಲಿ ಸೇರಿದ್ದಾರೆ.

ಮೃತರಲ್ಲಿ 8 ಮಂದಿ ಇರಾನಿಯನ್ನರು, ಇಬ್ಬರು ಸಿರಿಯನ್ನರು ಹಾಗೂ ಓರ್ವ ಲೆಬನೀಸ್ ಸೇರಿದ್ದಾರೆ. ಇವರೆಲ್ಲರೂ ಹೋರಾಟಗಾರರು. ನಾಗರಿಕರು ಯಾರೂ ಮೃತಪಟ್ಟಿಲ್ಲ ಎಂದು ಸಿರಿಯಾದಲ್ಲಿನ ಮೂಲಗಳು ತಿಳಿಸಿವೆ.

ದಾಳಿಯಿಂದ ಸಂಪೂರ್ಣ ಕಟ್ಟಡ ನಾಶವಾಗಿದೆ. ಒಳಗಿದ್ದ ಎಲ್ಲರೂ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಹೊರತೆಗೆಯುವ ಹಾಗೂ ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ ಎಂದು ಸಿರಿಯಾದ ರಕ್ಷಣಾ ಸಚಿವಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.